ತೊಡಿಕಾನ ದೇವಳಕ್ಕೆ ದೇವರಗುಂಡಿಯಿಂದ ಪವಿತ್ರ ಜಲತೀರ್ಥ ಯಾತ್ರೆ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ.18:ಸುಳ್ಯ ಸೀಮೆ ದೇವಸ್ಥಾನ ತೊಡಿಕಾನ ಮಲ್ಲಿಕಾರ್ಜುನ ದೇವರ ಸನ್ನಿಧಾನಕ್ಕೆ ದೇವರ ಗುಂಡಿ ಯಿಂದ ಪವಿತ್ರ ಜಲವನ್ನು ತಂದು ಮಲ್ಲಿಕಾರ್ಜುನ ದೇವರಿಗೆ ಅಭಿಷೇಕದ ನಂತರ ಭಕ್ತಾದಿಗಳಿಗೆ ತೀರ್ಥ ವಿತರಿಸುವ ಸಂಪ್ರದಾಯ ನಡೆಯಿತು.

 

ಸಂಪ್ರದಾಯದ ಪ್ರಕಾರ ಸುಳ್ಯ ವಿಶ್ವಹಿಂದೂ ಪರಿಷತ್ ಬಜರಂಗದಳ ಸಂಘಟನೆಯ ಕಾರ್ಯಕರ್ತರು ಮತ್ತು ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ದೇವಳದ ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೇವರಗುಂಡಿಯಿಂದ ಪವಿತ್ರ ತೀರ್ಥ ಜಲವನ್ನು ಶ್ರೀ ದೇವರ ಸನ್ನಿಧಾನಕ್ಕೆ ತಂದು ಮಲ್ಲಿಕಾರ್ಜುನ ದೇವರಿಗೆ ಅಭಿಷೇಕ ಮಾಡಲಾಯಿತು. ಬಳಿಕ ಆಗಮಿಸಿದ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಲಾಯಿತು.ಈ ಸಂದರ್ಭದಲ್ಲಿ ವಿ. ಹಿಂ. ಪ ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಜಿಲ್ಲಾ ಸಹ ಸಂಯೋಜಕ ಲತೀಶ್ ಗುಂಡ್ಯ, ದೇವಸ್ಥಾನದ ವ್ಯ.ಸ.ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ,ಸಂಘಟನೆಯ ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Also Read  ಉಳ್ಳಾಲ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ

 

error: Content is protected !!
Scroll to Top