ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರಿನಲ್ಲಿ ಪ್ರಸ್ತುತ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋರ್ಸ್‍ಗಾಗಿ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ ಮೇರಿನ್/ ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಆಯೋಜಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ. 93 ಮತ್ತು 94, ಬೆಳಗೊಳ ಕೈಗಾರಿಕಾ ಪ್ರದೇಶ, ಕೆ.ಆರ್.ಎಸ್ ರಸ್ತೆ, ಮೈಸೂರು – 16. ಮೊಬೈಲ್ ನಂ : 9243989954 ಸಂಪರ್ಕಿಸುವಂತೆ ಮಂಗಳೂರು ಜಿ.ಟಿ.ಟಿ.ಸಿ, ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅತಿಥಿ ಉಪನ್ಯಾಸಕರ ಹುದ್ದೆಗೆ ಯುಜಿಪಿ ನಿಯಮ ಅನುಸರಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

error: Content is protected !!
Scroll to Top