ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 19. ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಎಂಬಾತನನ್ನು ಕಿಡ್ನಾಪ್ ಮಾಡಿದ್ದ 7 ಮಂದಿಯನ್ನು ಕೋಲಾರ ಜಿಲ್ಲೆಯ ಮಾಸ್ತಿ ಎಂಬಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗುರುವಾರ ಸಂಜೆ ಉದ್ಯಮಿಯೋರ್ವರ ಪುತ್ರ 8 ವರ್ಷದ ಅನುಭವ್ ಎಂಬ ಬಾಲಕನನ್ನು ಅಪಹರಣ ಮಾಡಿದ್ದ ಆರೋಪಿಗಳು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ, ಇದೀಗ ಕೋಲಾರ ಜಿಲ್ಲೆ ಮಾಸ್ತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕನನ್ನು ರಕ್ಷಿಸಲಾಗಿದ್ದು, ಮಾಸ್ತಿ ಠಾಣೆಯಲ್ಲಿರುವ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಉಜಿರೆಗೆ ಕರೆತರಲಾಗುವುದು ಎಂದು ತಿಳಿದು ಬಂದಿದೆ.

Also Read  ಗಂಜಿಮಠ ಗ್ರಾಮ ಪಂಚಾಯತ್ ಬಿಜೆಪಿ ಬೆಂಬಲಿತ ಸದಸ್ಯ ಆತ್ಮಹತ್ಯೆ

error: Content is protected !!
Scroll to Top