ಕುಕ್ಕೇ ಸುಬ್ರಹ್ಮಣ್ಯ ಚಂಪಾ ಷಷ್ಠಿಗೆ ತೆರೆ ➤ ವಿಜೃಂಭಣೆಯಿಂದ ನೆರವೇರಿದ ಬ್ರಹ್ಮರಥೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.20. ಇತಿಹಾಸ ಪ್ರಸಿದ್ಧ ಕುಕ್ಕೇ ಸುಬ್ರಹ್ಮಣ್ಯ ಸ್ವಾಮಿಯ ಚಂಪಾಷ‌ಷ್ಠಿ ಬ್ರಹ್ಮ ರಥೋತ್ಸವವು ಬಹಳ ವಿಜೃಂಭಣೆಯಿಂದ ಭಾನುವಾರ ಬೆಳಗ್ಗೆ ಧನುಲಗ್ನದ ಶುಭ ಮೂಹೂರ್ತದಲ್ಲಿ ನೆರವೇರಿತು.

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾಸ್ಥಳವಾಗಿರುವ ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರ್ಷಕ್ಕೊಮ್ಮೆ ನಡೆಯುವ ಬ್ರಹ್ಮರಥೋತ್ಸವ ಸೇವೆಗೆ ಕೊರೋನಾ ಹಿನ್ನೆಲೆಯಲ್ಲಿ ಅಂತರ್ ಜಿಲ್ಲಾ ಭಕ್ತರಿಗೆ ನಿಷೇಧ ಹೇರಲಾಗಿದ್ದು, ನಿರ್ದಿಷ್ಟ ಸಂಖ್ಯೆಯ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಬ್ರಹ್ಮ ರಥೋತ್ಸವದ ಮೊದಲು ದೇವಸ್ಥಾನದಲ್ಲಿ ಕುಕ್ಕೇ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರಿಗೆ ವಿಶೇಷ ಪೂಜೆಗಳು ನೆರವೇರಿತು. ರಥೋತ್ಸವದ ಬಳಿಕ ಉಮಾಮಹೇಶ್ವರ ಹಾಗೂ ಸುಬ್ರಹ್ಮಣ್ಯ ದೇವರಿಗೆ ವಿಶೇಷಪೂಜೆ ನೆರವೇರಿತು. ಇನ್ನು ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ಮೂಲಕ ಭಕ್ತಿಯ ಪರಾಕಾಷ್ಠೆ ಮೆರೆದರು.

Also Read  ಮೊದಲ ಸಚಿವ ಸಂಪುಟದಲ್ಲಿ 5 ಭರವಸೆ ಈಡೇರಿಸ್ತೇವೆ  ➤ ರಾಹುಲ್ ಗಾಂಧಿ ಮಹತ್ವದ ಘೋಷಣೆ

error: Content is protected !!
Scroll to Top