ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ರಾಬರ್ಟ್‌ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಎಂಬವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಬಾಂಬೆ ರವಿ ತಂಡದಲ್ಲಿದ್ದ  ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

 

ಆರೋಪಿಗಳನ್ನು ದರ್ಶನ್‌, ಗಿರೀಶ್‌, ಮೋಹನ್‌, ರಾಜನ್‌ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಬಾಂಬೆ ರವಿ ಮತ್ತು ನೀಲಸಂದ್ರದ ಮಂಜುನಾಥ್‌ ಎಂಬುವರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ.

Scroll to Top