ಗ್ರಾಮ ಪಂಚಾಯತ್ ಚುನಾವಣೆ ➤ ಡಿಸೆಂಬರ್ 22 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21: ಜಿಲ್ಲೆಯಲ್ಲಿ ಮೊದಲನೇ ಹಂತದಲ್ಲಿ ಡಿಸೆಂಬರ್ 22ರಂದು ಮಂಗಳೂರು ಉಪ ವಿಭಾಗದ 106 ಗ್ರಾಮ ಪಂಚಾಯತಿ ಮತ್ತು ಡಿಸೆಂಬರ್ 27ರಂದು ಎರಡನೇ ಹಂತದಲ್ಲಿ ಪುತ್ತೂರು ಉಪ ವಿಭಾಗದ 114 ಗ್ರಾಮ ಪಂಚಾಯತಿಗಳಲ್ಲಿ ಮತದಾನ ನಡೆಯಲಿದೆ.

 

ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ಮತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಮತ್ತು ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ಕೇಂದ್ರ ಸರಕಾರದ ಕಛೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಕಾರ್ಖಾನೆಗಳು, ಉಳಿದ ಕೈಗಾರಿಕಾ ಸಂಸ್ಥೆಗಳು ಹಾಗೂ ಸರ್ಕಾರಿ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಔದ್ಯೋಮಿಕಾ ಸಂಸ್ಥೆಗಳಲ್ಲಿ ಮತ್ತು ಖಾಯಂ ಹಾಗೂ ದಿನಗೂಲಿ ಮೇಲೆ ಕೆಲಸ ರ್ನಿಹಿಸುತ್ತಿರುವ ಅರ್ಹ ಮತದಾರರ ನೌಕರರಿಗೆ ಸೀಮಿತವಾದಂತೆ ಡಿಸೆಂಬರ್ 22ರಂದು ಪ್ರಜಾ ಪ್ರತಿನಿಧಿ ಕಾಯ್ದೆ, 1954ರ ಸೆಕ್ಷನ್ 135ರ ಅಡಿಯಲ್ಲಿ ಸರ್ಕಾರವು ವೇತನ ಸಹಿತ ರಜೆಯನ್ನು ಘೋಷಿಸಿ ಆದೇಶಿಸಿದೆ. ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ. ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಪಟ್ಟವರು ವ್ಯವಸ್ಥೆ ಮಾಡಬೇಕು. ಈ ಚುನಾವಣೆ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗುವಂತೆ ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  “ವಿಶ್ವ ಫಾರ್ಮಸಿಸ್ಟರ ದಿನ - ಸಪ್ಟೆಂಬರ್ 25”

error: Content is protected !!
Scroll to Top