ಬಾಲಕನ ಅಪಹರಣ ಪ್ರಕರಣ ➤ ಜಿಲ್ಲಾ ಎಸ್ಪಿ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ ೩೩ ಗಂಟೆಯಲ್ಲೇ ಬೇಧಿಸಿ ಬಾಲಕನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಿದ ದ.ಕ. ಜಿಲ್ಲಾ ಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡಕ್ಕೆ ಅಭಿನಂದಿಸುವ ಕಾರ್ಯಕ್ರಮವು ಸೋಮವಾರ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನಡೆಯಿತು.

ಪೊಲೀಸ್ ತಂಡವನ್ನು ಅಭಿನಂದಿಸಿದ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಾಲಕ ಅನುಭವ್ ಅಪಹರಣ ಜಿಲ್ಲೆಯ ಜನತೆಯ ಆತಂಕಕ್ಕೆ ಕಾರಣವಾಗಿತ್ತು. ಈ ಪ್ರಕರಣವನ್ನು ಬೇಧಿಸಲು ಪೊಲೀಸ್ ತಂಡ ಕರಾರುವಕ್ಕಾಗಿ, ಯೋಜನಾ ಬದ್ಧವಾಗಿ ಕಾರ್ಯನಿರ್ವಹಣೆ ಮಾಡಿ ಆರೋಪಿಗಳನ್ನು ಬಂಧಿಸಿರುವುದು ಶ್ಲಾಘನೀಯ. ಪೊಲೀಸರ ಈ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಲಿ ಎಂದರು. ಜಿಲ್ಲೆಯಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ನಡೆಯುತ್ತಿರುವ ಕೃತ್ಯ ಖಂಡನೀಯ. ಇಂತಹ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ಈ ಕಾರ್ಯಾಚರಣೆಯ ಹಿಂದೆ ಪೊಲೀಸ್ ತಂಡದ ಶ್ರಮವಿದೆ. ಅಧಿಕಾರಿಗಳು ಘಟನೆ ನಡೆದ ಬಳಿಕ ಎರಡು ದಿನ ನಿದ್ದೆಬಿಟ್ಟು ಕೆಲಸ ಮಾಡಿದ್ದಾರೆ. ಎಲ್ಲರ ಸಹಕಾರದಿಂದ ಸಾಧ್ಯವಾಯಿತು ಎಂದರು.

Also Read  ಆಟವಾಡಲು ತೆರಳಿದ್ದ ಶಾಲಾ ಬಾಲಕ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

 

error: Content is protected !!
Scroll to Top