ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.)ದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ (56) ಅವರು ಕೆಲವಿ ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು.

ಶ್ವಾಸಕೋಶ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಪಿ.ಎಫ್.ಐ. ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ತಿಳಿಸಿದ್ದಾರೆ. ಕೈಕಂಬ ಮುಹಮ್ಮದ್ ಶರೀಫ್ ಆದ ಅವರು ಊರಿನಲ್ಲಿ ‘ಮುಹಮ್ಮದ್’ ಎಂದೇ ಪರಿಚಿತರಾಗಿದ್ದರು. ಬಾಲ್ಯದಲ್ಲೇ ಸಾಮಾಜಿಕ ಕಳಕಳಿ ಹೊಂದಿದ್ದ ಅವರು ಸಮಸ್ತ ಕೇರಳದ ಆಧೀನ ಸಂಘಟನೆಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.‌ ಬಿ.ಎಸ್.ಸಿ ಪದವೀಧರರಾಗಿರುವ ಇವರು ಖ್ಯಾತ ಧಾರ್ಮಿಕ ವಿದ್ವಾಂಸ ದಿ.ಮಿತ್ತಬೈಲ್ ಜಬ್ಬಾರ್ ಉಸ್ತಾದ್ ಅವರ ಶಿಷ್ಯರಾಗಿ ಧಾರ್ಮಿಕ ವಿದ್ಯಾಭ್ಯಾಸ ಪಡೆದಿದ್ದರು‌. ಅಲ್ಪಸಂಖ್ಯಾತ ಸಮುದಾಯಗಳ ಮತ್ತು ದಲಿತ ಸಮುದಾಯದ ಒಗ್ಗಟ್ಟು, ರಾಜಕೀಯ ಅಸ್ತಿತ್ವದ ಬಗ್ಗೆ ತನ್ನದೇ ಪರಿಕಲ್ಪನೆಯನ್ನು ಹೊಂದಿದ್ದ ಕೆ.ಎಂ.ಶರೀಫ್, ರಾಜಕೀಯ ಪಕ್ಷವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ.)ದ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Also Read  ಖಾತೆ ಹಂಚಿಕೆಗೂ ಮುನ್ನವೇ ಪೊಲೀಸರಿಗೆ ಖಡಕ್ ನಿರ್ದೇಶನಗಳನ್ನು ನೀಡಿದ ಪ್ರಿಯಾಂಕ್ ಖರ್ಗೆ.!

error: Content is protected !!
Scroll to Top