ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 22. ಇಲ್ಲಿನ ಹರೇಕಳ ಮತಗಟ್ಟೆಯಲ್ಲಿ ಎಸ್ಡಿಪಿಐ ಮತ್ರು ಕಾಂಗ್ರೆಸ್ ಕಾರ್ಯಕರ್ತರ ನಡುವರ ಘರ್ಷಣೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತನೋರ್ವ ಪದೇ ಪದೇ ಮತಗಟ್ಟೆಯೊಳಗೆ ಹೋಗುವುದನ್ನು ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಎಂಬವರಿಗೆ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಲಘು ಲಾಠಿ ಪ್ರಹಾರ ನಡೆಸಿದ್ದಾರೆ.

Also Read  ಕಡಬ: ವಿಷ ಸೇವಿಸಿ ವೃದ್ಧೆ ಆತ್ಮಹತ್ಯೆ

error: Content is protected !!
Scroll to Top