ಕ್ಲಬ್ ಮೇಲೆ ದಾಳಿ ➤ ಕ್ರಿಕೆಟಿಗ ಸುರೇಶ್ ರೈನಾ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 22. ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಜನರನ್ನು ಮುಂಬೈ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಮುಂಬೈ ಡ್ರಾಗನ್ ಫ್ಲೈ ಕ್ಲಬ್ ಮೇಲೆ ರೈಡ್ ಮಾಡಿದ ಪೊಲೀಸರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವಾರನ್ನೂ ವಶಕ್ಕೆ ಪಡೆದಿದ್ದು, ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕೋವಿಡ್ 19 ನಿಯಮಗಳ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯ ನಂತರ ಕ್ಲಬ್ ನಡೆಸುವಂತಿಲ್ಲ. ಆದರೆ, ಅವಧಿ ಮೀರಿ ಕ್ಲಬ್ ನಲ್ಲಿ ಹಲವರು ಉಪಸ್ಥಿತರಿದ್ದರು.

Scroll to Top