ಗ್ರಾ.ಪಂ. ಸಾರ್ವತ್ರಿಕ ಚುನಾವಣೆ ➤ ಅನಗತ್ಯ ಕೆಲಸಕ್ಕೆ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22:ಗ್ರಾಮ ಪಂಚಾಯತ್‍ಗಳ ಸಾರ್ವತ್ರಿಕ ಚುನಾವಣೆ-2020ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಡಿಸೆಂಬರ್ 22 ರ ಇಂದು ಮೊದಲ ಹಂತದ ಚುನಾವಣೆ ಬಂಟ್ವಾಳ ತಾಲೂಕಿನಲ್ಲಿ ನಡೆಯಲಿರುವುದರಿಂದ, ಇಂದು  ಸಂಜೆ 5 ಗಂಟೆಯವರೆಗೆ ಹಾಗೂ ಎರಡನೇ ಹಂತದ ಚುನಾವಣೆ ಡಿಸೆಂಬರ್ 27 ರಂದು ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ನಡೆಯಲಿರುವುದರಿಂದ, ಡಿಸೆಂಬರ್ 25 ರಂದು ಸಂಜೆ 5 ಗಂಟೆಯಿಂದ 27 ರಂದು ಸಂಜೆ 5 ಗಂಟೆಯವರೆಗೆ ಮತದಾನ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೆಶಿಸಿದ್ದಾರೆ.

Also Read  ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮತದಾನದ ದಿನದಂದು ಮತದಾನ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಮತದಾನ ಕಾರ್ಯಕ್ಕೆ ಬರುವ ಮತದಾರರನ್ನು ಹೊರತುಪಡಿಸಿ ಇತರ ವ್ಯಕ್ತಿಗಳು ಸಕಾರಣವಿಲ್ಲದೇ 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದನ್ನು , ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಚಿ, ಚೂರಿ, ದೊಣ್ಣೆ, ಲಾಠಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ.

 

 

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪದ ಹಾಡುವುದು, ಚೇಷ್ಠೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಹಾಗೂ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ, ಭಿತ್ತಿಪತ್ರಗಳನ್ನು ಅಂಟಿಸುವುದರಿಂದ, ಅಸಭ್ಯತನ, ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೆರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.

error: Content is protected !!
Scroll to Top