ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣ ➤ ತನಿಖೆ ಎರಡು ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23:  ಬೆಳ್ತಂಗಡಿಯ ಕೊಕ್ಕಡದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ದರೋಡೆಕೋರರ ಪತ್ತೆಗೆ 2ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ .

 

ಮಂಗಳೂರಿನಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಇದು ಏಳರಿಂದ ಎಂಡು ಮಂದಿ ಮುಸುಕುಧಾರಿಗಳು ನಡೆಸಿರುವ ಕೃತ್ಯವಾಗಿದ್ದು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದರು . ದರೋಡೆ ಸಂದರ್ಭ ಚೂರಿ ಇರಿತಕ್ಕೊಳಗಾದ ಗೀತಾ ಶೆಟ್ಟಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ 2ತಂಡ ರಚನೆ ಮಾಡಲಾಗಿದೆ ಎಂದಿದ್ದಾರೆ.ಕೊಕ್ಕಡದಲ್ಲಿ ನಡೆದಿರುವ ದರೋಡೆ ಪ್ರಕರಣ ಜೈಪುರ ಹಾಗೂ ಕಾರ್ಕಳ ದರೋಡೆ ಪ್ರಕರಣ ಸಾಮ್ಯತೆ ಹೊಂದಿದ್ದು ಅದೇ ತಂಡ ನಡೆಸಿರುವ ಶಂಕೆ ಇದೆ. ಹೀಗಾಗಿ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಹೇಳಿದ್ದಾರೆ.

Also Read  ಬ್ರಿಡ್ಜ್ ಗೆ ಕಾರು ಢಿಕ್ಕಿ ➤ನಾಲ್ವರು ಸ್ಥಳದಲ್ಲೇ ಮೃತ್ಯು

error: Content is protected !!
Scroll to Top