ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 23. ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡವು ದಾಳಿ ನಡೆಸಿ ಅಕ್ರಮ ಮರ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

ಅಕ್ರಮ ಮರ ಸಾಗಾಟದ ಕುರಿತಂತೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಪ್ಪಿನಂಗಡಿ ಅರಣ್ಯ ಇಲಾಖಾ ಅಧಿಕಾರಿಗಳ ತಂಡವು ದಾಳಿ ನಡೆಸಿ ಪೆರಿಯಡ್ಕ ಎಂಬಲ್ಲಿ ಮರ ಹಾಗೂ ಲಾರಿಯನ್ನು ವಶಪಡಿಸಿಕೊಂಡಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ. ಇದರ ಒಟ್ಟು ಮೌಲ್ಯ 10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಉಪ ಸಂರಕ್ಷಣಾಧಿಕಾರಿ ಡಾ. ಕರಿಕಲನ್ ರವರ ಆದೇಶದಂತೆ ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪರವರ ಮಾರ್ಗದರ್ಶನದಂತೆ ತನಿಖೆ ನಡೆಸುತ್ತಿದ್ದಾರೆ.

Also Read  ಕೊಡಗು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

error: Content is protected !!
Scroll to Top