ನೆಲ್ಯಾಡಿ :ಗ್ರಾ.ಪಂ.ಅಭ್ಯರ್ಥಿ ಅಬ್ದುಲ್ ಹಮೀದ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಗ್ರಾ. ಪಂ ಚುನಾವಣೆಗೆ ಸಂಬಂಧಿಸಿದಂತೆ ನೆಲ್ಯಾಡಿ ಗ್ರಾ.ಪಂ ನ ಎರಡನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್ (60) ರವರು ಹೃದಯಾಘಾತದಿಂದ ನಿಧನರಾದರು.

ಡಿ,22ರ ಕಳೆದ ದಿನ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅಬ್ದುಲ್ ಹಮೀದ್ ರವರಿಗೆ ತಡರಾತ್ರಿ ವೇಳೆ ಎದೆನೋವು ಕಾಣಿಸಿಕೊಂಡಿದ್ದು ಮನೆಯವರು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಬ್ದುಲ್ ಹಮೀದ್ ರವರು ಕಾಂಗ್ರೇಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ ನಲ್ಲಿ ಕಾಂಗ್ರೇಸ್ ಬೆಂಬಲಿತ ಸದಸ್ಯರಾಗಿದ್ದರು. ಆದರೆ ಈ ಬಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಬಿಜೆಪಿ ಅಭ್ಯರ್ಥಿಯಾಗಿ ನೆಲ್ಯಾಡಿ ಗ್ರಾ.ಪಂ ನ 2ನೇ ವಾರ್ಡ್‍ನ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದರು.

Also Read  ಕನಕ ಕೀರ್ತನ ಗಾಯನ ಕಾರ್ಯಕ್ರಮ

 

error: Content is protected !!
Scroll to Top