ಬಸ್ – ಲಾರಿ ಡಿಕ್ಕಿ: 7 ಜನ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.07. ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 7 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ. ವಿ.ಆರ್.ಎಲ್. ಬಸ್ ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಇದಾಗಿದ್ದು, ಬೆಳಗಾವಿಯಿಂದ ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ.

ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಸೇರಿದಂತೆ 7 ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೈಕ್ ಸ್ಕಿಡ್ – ಸವಾರ ಮೃತ್ಯು, ಸಹಸವಾರ ಗಂಭೀರ

error: Content is protected !!
Scroll to Top