(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಸೆಂಟ್ರಲ್ ಮಾರ್ಕೆಟ್‌ನಲ್ಲಿರುವ ಬಟ್ಟೆ ಅಂಗಡಿಯೊಂದರ ಪಾಲುದಾರ, ಉದ್ಯಮಿಯೊಬ್ಬರು ನಾಪತ್ತೆಯಾದ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲಾಗಿದೆ ಎನ್ನಲಾಗಿದೆ.
ಮಾರ್ನಮಿಕಟ್ಟೆ ನಿವಾಸಿ ಸಲೀಂ ಅಹ್ಮದ್ (35) ನಾಪತ್ತೆಯಾದ ಉದ್ಯಮಿ. ಇವರು ಮಾರ್ನಮಿಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಡಿ.21ರ ಬೆಳಗ್ಗೆ 8:30ಕ್ಕೆ ಮನೆಯಿಂದ ತೆರಳಿದವರು ವಾಪಸಾಗಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನೆರೆಕರೆಯವರಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಟ ನಡೆಸಲಾಗಿದೆ. ಆದರೆ ಸಲೀಂ ಅಹ್ಮದ್ ಈವರೆಗೆ ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.