ಕೆರೆಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ.?!

(ನ್ಯೂಸ್ ಕಡಬ) newskadaba.com ಹಾವೇರಿ, ಡಿ.23: ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದ ತಾಯಿ ತನ್ನ ಮಗಳ ಜತೆಸೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ನಡೆದಿದೆ.

ಹಿರೇಕೆರೂರಿನ ದುರ್ಗಾದೇವಿ ಕೆರೆಯಲ್ಲಿ ತಾಇ ಶಿವಕ್ಕ (40) ಮತ್ತು ಆಕೆಯ ಪುತ್ರಿ ಸಂಗೀತಾ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಇಬ್ಬರೂ ರಟ್ಟೇಹಳ್ಳಿ ತಾಕೂಕಿನ ಹಳ್ಯಾಳ ತಾಂಡ ನಿವಾಸಿಗಳೆಂದು ಗುರುತಿಸಲಾಗಿದೆ. ಮಗಳನ್ನು ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ್ದು ಸ್ಥಳೀಯರ ನೆರವಿನೊಡನೆ ಪೋಲೀಸರು ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಹಿರೇಕೆರೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

error: Content is protected !!
Scroll to Top