ಶಾಸಕ ಯು.ಟಿ.ಖಾದರ್ ಹತ್ಯೆಗೆ ನಡೆಯಿತಾ ಸ್ಕೆಚ್..⁉️ ➤ ಶಾಸಕರ ಕಾರನ್ನು ಹಿಂಬಾಲಿಸಿದ ಅಪರಿಚಿತರು..‼️

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23. ಶಾಸಕ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತ ಬೈಕೊಂದು ಹಿಂಬಾಲಿಸಿದ ಘಟನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಶಾಸಕ ಯು.ಟಿ.ಖಾದರ್ ರವರು ದೇರಳಕಟ್ಟೆಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿ ಬುಧವಾರ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ನಡುವೆ ದೇರಳಕಟ್ಟೆಯಿಂದ ಬೈಕೊಂದರಲ್ಲಿ ಇಬ್ಬರು ಅಪರಿಚಿತರು ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿಕೊಂಡು ಬರುತ್ತಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ನಂತೂರು ತಲುಪುವ ವೇಳೆ ಶಾಸಕರ ಎಸ್ಕಾರ್ಟ್ ವಾಹನವು ಬೈಕ್ ಸವಾರರನ್ನು ತಡೆದಿದ್ದು, ಈ ವೇಳೆ ಬೈಕ್ ಸವಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವಿಚಾರವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಅಪರಿಚಿತ ದುಷ್ಕರ್ಮಿಗಳು ಶಾಸಕ ಯು.ಟಿ.ಖಾದರ್ ರವರ ಹತ್ಯೆಗೆ ಯತ್ನಿಸಿದರೇ ಎಂಬ ಪ್ರಶ್ನೆ ಉದ್ಭವವಾಗಿದೆ. ಪೊಲೀಸ್ ತನಿಖೆಯಿಂದ ನಿಜಾಂಶ ತಿಳಿದುಬರಬೇಕಿದೆ.

Also Read  ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..!

error: Content is protected !!
Scroll to Top