ಜನವರಿ 1 ರಿಂದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ► ನೂತನವಾಗಿ ಆರಂಭವಾಗಲಿದೆ 246 ಕ್ಯಾಂಟೀನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.12. ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳು ಮಾತ್ರವಲ್ಲದೆ, ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಪಟ್ಟಣ ಪ್ರದೇಶಗಳಲ್ಲೂ ಬೆಂಗಳೂರು ಮಾದರಿಯಲ್ಲಿಯೇ 2018 ರ ಜ.1 ರಿಂದ ‘ಇಂದಿರಾ ಕ್ಯಾಂಟೀನ್’ ಪ್ರಾರಂಭಿಸಲು ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬಡ-ಕೂಲಿ ಕಾರ್ಮಿಕರಿಗೆ ರಿಯಾಯಿತಿ ದರದಲ್ಲಿ ಆಹಾರ ಒದಗಿಸುವ ಮಹತ್ವದ ಈ ಯೋಜನೆಯ ಅನುಷ್ಠಾನಕ್ಕೆ ನವೆಂಬರ್ ಅಂತ್ಯದೊಳಗೆ ಸ್ಥಳ ಗುರುತಿಸಬೇಕು. ಡಿಸೆಂಬರ್ ಅಂತ್ಯದೊಳಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಪೌರಾಡಳಿತ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

Also Read  ಮಂಗಳೂರು : ಬಾಂಬ್ ಸ್ಪೋಟ - ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

ಸರಕಾರಿ ಆಸ್ಪತ್ರೆಗಳ ಆವರಣ, ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ‘ಇಂದಿರಾ ಕ್ಯಾಂಟೀನ್’ ಪ್ರಾರಂಭಿಸಲು ಸೂಚಿಸಲಾಗಿದೆ. ರಾಜ್ಯದ 171 ಸ್ಥಳಗಳಲ್ಲಿನ ಒಟ್ಟು 246 ಕೇಂದ್ರಗಳಲ್ಲಿ 2018ರ ಜನವರಿ 1ರಿಂದ ‘ಇಂದಿರಾ ಕ್ಯಾಂಟೀನ್’ ಪ್ರಾರಂಭವಾಗಲಿವೆ ಎಂದರು.

error: Content is protected !!
Scroll to Top