(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿದೇಶಗಳಲ್ಲಿ ಕೋವಿಡ್ ಎರಡನೇ ಅಲೆ ಹಾಗೂ ರೂಪಾಂತರಿತ ಹೊಸ ಕೊರೋನ ಸೋಂಕು ಕಂಡು ಬಂದಿದ್ದು ಇಲ್ಲಿಗೂ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಹಾಗೂ ಔಷದಿ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮು ಸಂಬಂಧಿತ ರೋಗಕ್ಕೆ ಔಷಧಿ ಪಡೆಯುವವರ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಇವುಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಸಾಫ್ಟ್‌ವೇರ್‍ನಲ್ಲಿ ನಮೂದಿಸಲು ಸೂಚಿಸಿದರು.
ಮದುವೆ ಸೇರಿದಂತೆ ಇನ್ನಿತರ ಸಭಾ ಕಾರ್ಯಕ್ರಮಗಳಲ್ಲಿ 200ಕ್ಕಿಂತ ಅಧಿಕ ಹಾಗೂ ಬಯಲು ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ 500 ಕ್ಕಿಂತ ಅಧಿಕ ಜನ ಪಾಲ್ಗೊಳ್ಳಬಾರದು. ಒಂದು ವೇಳೆ ಮಿತಿ ಮೀರಿದ ಜನ ಪಾಲ್ಗೊಂಡಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಸ್ಥರಿಗೆ ಹತ್ತು ಸಾವಿರ ದಂಡ ವಿಧಿಸಬೇಕು. ಮೂರನೇ ಬಾರಿಯೂ ಉಲ್ಲಂಘನೆಯಾದರೆ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ಸೂಚಿಸಿದರು. ಖಾಸಗಿ, ಸರ್ಕಾರಿ ಆಸ್ಪತ್ರೆ, ಕ್ಲಿನಿಕ್ ಹಾಗೂ ಮೆಡಿಕಲ್ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ ರೋಗಗಳಿಗೆ ಔಷಧಿ ಪಡೆಯುವವರ ಮಾಹಿತಿಯನ್ನು ಕಡ್ಡಾಯವಾಗಿ ಜಿಲ್ಲಾಡಳಿತಕ್ಕೆ ನೀಡಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೂಚಿಸಿದರು.ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ಲಸಿಕೆಯ ಪೂರ್ವ ತಯಾರಿ ಮತ್ತು 2021 ರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ರೂಪಾಂತರಿತ ಹೊಸ ಕೊರೋನಾ ರೋಗಗದ ಕುರಿತು ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದೇಶಗಳಲ್ಲಿ ಕೋವಿಡ್ ಎರಡನೇ ಅಲೆ ಹಾಗೂ ರೂಪಾಂತರಿತ ಹೊಸ ಕೊರೋನ ಸೋಂಕು ಕಂಡು ಬಂದಿದ್ದು ಇಲ್ಲಿಗೂ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಹಾಗೂ ಔಷದಿ ಅಂಗಡಿಗಳಲ್ಲಿ ಜ್ವರ, ಶೀತ, ನೆಗಡಿ, ಕೆಮ್ಮು ಸಂಬಂಧಿತ ರೋಗಕ್ಕೆ ಔಷಧಿ ಪಡೆಯುವವರ ಸಂಪೂರ್ಣ ಮಾಹಿತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಇವುಗಳನ್ನು ಕಡ್ಡಾಯವಾಗಿ ಸಂಬಂಧಿಸಿದ ಸಾಫ್ಟ್‌ವೇರ್‍ನಲ್ಲಿ ನಮೂದಿಸಲು ಸೂಚಿಸಿದರು. ಮದುವೆ ಸೇರಿದಂತೆ ಇನ್ನಿತರ ಸಭಾ ಕಾರ್ಯಕ್ರಮಗಳಲ್ಲಿ 200ಕ್ಕಿಂತ ಅಧಿಕ ಹಾಗೂ ಬಯಲು ಪ್ರದೇಶಗಳಲ್ಲಿ ನಡೆಯುವ ಸಮಾರಂಭಗಳಲ್ಲಿ 500 ಕ್ಕಿಂತ ಅಧಿಕ ಜನ ಪಾಲ್ಗೊಳ್ಳಬಾರದು. ಒಂದು ವೇಳೆ ಮಿತಿ ಮೀರಿದ ಜನ ಪಾಲ್ಗೊಂಡಿರುವುದು ಗಮನಕ್ಕೆ ಬಂದರೆ ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಸ್ಥರಿಗೆ ಹತ್ತು ಸಾವಿರ ದಂಡ ವಿಧಿಸಬೇಕು. ಮೂರನೇ ಬಾರಿಯೂ ಉಲ್ಲಂಘನೆಯಾದರೆ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ಸೂಚಿಸಿದರು.