ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ.

ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ಇಂದಿನಿಂದ (ಡಿಸೆಂಬರ್ 24) ಕರ್ಫ್ಯೂ ಮುಗಿಯುವ ತನಕ ಕಾಲಮಿತಿ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಈ ದಿನದಲ್ಲಿ ಯಕ್ಷಗಾನ ಬುಕ್ ಮಾಡಿದವರು ಕಾಲಮಿತಿ ಯಕ್ಷಗಾನಕ್ಕೆ ಸಹಕರಿಸಬೇಕೆಂದು ಕ್ಷೇತ್ರದ ಆಡಳಿತ ಮಂಡಲಿ ವಿನಂತಿ ಮಾಡಿಕೊಂಡಿದೆ.

Also Read  ಐಸ್ ಕ್ರೀಮ್ ದಾಸ್ತಾನು ಕೇಂದ್ರದಲ್ಲಿ ಭಾರೀ ಬೆಂಕಿ ಅವಘಡ..!   ➤ ಅಪಾರ ನಷ್ಟ

 

error: Content is protected !!
Scroll to Top