ಕೊರೋನಾ 2ನೇ ಅಲೆಯ ಭೀತಿ ➤ ಇನ್ಮುಂದೆ ಕಡಬದಲ್ಲಿ ಮಾಸ್ಕ್ ಧರಿಸದವರಿಗೆ ದಂಡ | ಸಭೆ – ಸಮಾರಂಭಗಳಿಗೆ ಅನುಮತಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಕಡಬ, ಡಿ.24. ಎರಡನೆಯ ಹಂತದ ಕೊರೋನಾ ವೈರಸ್ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ ಕಡಬ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಹಾಕದವರಿಗೆ ನೋಡಲ್ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ.

ಕಡಬ ಪೇಟೆಯಲ್ಲಿ ಸಾರ್ವಜನಿಕರು ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಸ್ಯಾನಿಟೈಸರ್‌ಗಳನ್ನು ಬಳಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಲು ಪಂಚಾಯತ್ ಅನುಮತಿ ಕಡ್ಡಾಯವಾಗಿದೆ. ಕಾರ್ಯಕ್ರಮಗಳಿಗೆ ಅನುಮತಿ ನೀಡಿದರೂ ಅಲ್ಲಿ ಸರಕಾರದ ಮಾರ್ಗ ಸೂಚಿಗಳನ್ನು ಪಾಲಿಸುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ದಂಡ ವಿಧಿಸಲಾಗುವುದು ಎಂದು ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ವಂಚನೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

error: Content is protected !!
Scroll to Top