ಮಂಗಳೂರು :ಮದುವೆ ಪ್ರಪೋಸ್, ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿದ್ದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಸಾಮಾಜಿಕ ಜಾಲತಾಣ ಫೇಸ್ ಬುಕ್ನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸುವುದಲ್ಲದೆ, ಮದುವೆ ಪ್ರಸ್ತಾಪ, ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿತ್ರದುರ್ಗದ ಹೊಸದುರ್ಗ ತಾಲೂಕಿನ ಕುರುಬನಹಳ್ಳಿ ನಿವಾಸಿ ಪರಮೇಶ್ವರಪ್ಪ ರಂಗಪ್ಪ (23) ಬಂಧಿತ ಆರೋಪಿ. ಮ್ಯಾಟ್ರೊಮೊನಿಯಲ್ ನಲ್ಲಿ ಆರೋಪಿಯು ತಾನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ಎಂಬುದಾಗಿ ಬಿಂಬಿಸಿದ್ದ.ಈತ 20 ನಕಲಿ ಖಾತೆ ಸೃಷ್ಟಿಸಿ ಸರ್ಕಾರಿ ಇಲಾಖೆಗಳ ಉತ್ತಮ ದರ್ಜೆಯ ಅಧಿಕಾರಿಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಸ್ನೇಹ ಬೆಳೆಸಿದ್ದ. ಇದನ್ನು ತನ್ನ ದಂಧೆಗೆ ಬಳಸಿಕೊಳ್ಳುತ್ತಿದ್ದ. ಈತ ಈ ವರೆಗೆ 13 ಮಂದಿಯನ್ನು ವಂಚಿಸಿದ್ದಾನೆ ಎಂದು ಪೊಲೀಸರು ಮಾಹಿತಿನೀಡಿದ್ದಾರೆ.ಪ್ರಕರಣಗಳನ್ನು ಕೂಲಂಕಷವಾಗಿ ಅಧ್ಯಯನ ಮಾಡಿದ ಸೈಬರ್ ಕ್ರೈಂ ಪೊಲೀಸರು, ತನಿಖೆ ನಡೆಸಿ ಆರೋಪಿಯನ್ನು ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತ ಆರೋಪಿಯಿಂದ ಲ್ಯಾಪ್ ಟಾಪ್, ಐದು ಮೊಬೈಲ್ ಗಳು, ಅಂಚೆ ಇಲಾಖೆಯ ನಕಲಿ ಗುರುತಿನ ಚೀಟಿ, ಐಸಿಐಸಿಐ ಬ್ಯಾಂಕ್ ನ ಡೆಬಿಟ್ ಕಾರ್ಡ್ ವೊಂದನ್ನು ವಶಕ್ಕೆ ಪಡೆಯಲಾಗಿದೆ. ಸ್ವಾಧೀನಪಡಿಸಿಕೊಳ್ಳಲಾದ ವಸ್ತುಗಳ ಸೊತ್ತಿನ ವೌಲ್ಯ 1.35 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Also Read  ಯಾವುದೇ ಸಂಭಾವನೆ ಪಡೆಯದೇ ರಸ್ತೆ ದುರಸ್ತಿ ಮಾಡುವ ಹಿರಿ ಜೀವ ➤ ಪರಿಸರ ಪ್ರೇಮವೆಂದರೆ ಇವರಿಗೆ ಪಂಚಪ್ರಾಣ ✍?ಸದಾನಂದ ಆಲಂಕಾರು

 

 

error: Content is protected !!
Scroll to Top