ಶಾಸಕ ಖಾದರ್ ಕಾರು ಹಿಂಬಾಲಿಸಿದಾತನ ಬಂಧಿಸಿ ಬಿಡುಗಡೆ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಶಾಸಕ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತರು ಹಿಂಬಾಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿ ಬಳಿಕ ಬಿಡುಗಡೆಗೊಳಿಸಿದ್ದಾರೆ.

ಬೋಳೂರು ನಿವಾಸಿ ಅನೀಸ್ ಪೂಜಾರಿ (28) ವಿಚಾರಣೆಗೊಳಗಾಗಿ ಬಿಡುಗಡೆಯಾದ ಯುವಕ. ಈತ ಬೋಳೂರು ವಾರ್ಡ್‌ನ ಕಾಂಗ್ರೆಸ್‌ನ ಕಾರ್ಯಕರ್ತೆಯೊಬ್ಬರ ಮಗ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಆತನಿಂದ‌ಮುಚ್ಚಳಿಗೆ ಬರೆಸಿ ಬಿಡುಗಡೆ ಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.ಶಾಸಕ ಯು.ಟಿ. ಖಾದರ್ ಬುಧವಾರ ಸಂಜೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ಮಂಗಳೂರು ವಿಮಾನ ನಿಲ್ದಾಣದತ್ತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತನೋರ್ವ ಹಿಂಬಾಲಿಸಿದ್ದ. ಈ‌ ಸಂಬಂಧ ಪ್ರಕರಣ ದಾಖಲಾಗಿತ್ತು.

Also Read  ಲಾರಿ-ಬೈಕ್ ಢಿಕ್ಕಿ: ಯುವಕ ಮೃತ್ಯು

 

 

error: Content is protected !!
Scroll to Top