ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.

 

ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ ಗೌರವ ಕಾರ್ಯದರ್ಶಿಗಳ ಬಳಿ ವಿಚಾರಿಸಬಹುದು. ಬೇರೆ ಜಿಲ್ಲೆಯವರಿಗೆ ಪ್ರವೇಶ ಪತ್ರ ತಲುಪದಿದ್ದಲ್ಲಿ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬಹುದು. ಪ್ರವೇಶ ಪತ್ರ ಮತ್ತು ಪರೀಕ್ಷಾ ಕೇಂದ್ರಗಳ ವಿಳಾಸವನ್ನು ಅಂತರ್ಜಾಲ ತಾಣ  ಮೂಲಕ ಪಡೆದುಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26623584 ಸಂಪರ್ಕಿಸಲು ಕನ್ನಡ ಸಾಹಿತ್ಯ ಪರಿಷತ್ತು, ಗೌರವ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ವಿವಾಹದಲ್ಲಿ ಅಡಚಣೆ ಸಮಸ್ಯೆಗೆ ಹೀಗೆ ಮಾಡಿ ಬೇಗ ಮದುವೆ ಭಾಗ್ಯ ಬಯಸುವವರು ಈ ರೀತಿ ಮಾಡಿದರೆ ಸಾಕು

error: Content is protected !!
Scroll to Top