ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.25: ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.

 

45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ ಭರತ್, ಹೊಸ ಸಿನಿಮಾದ ತಯಾರಿಯಲ್ಲಿದ್ದಾಗಲೇ ವಿಧಿವಶರಾಗಿದ್ದಾರೆ. ರಾಮನಗರ ಚಿಕ್ಕಮುಳುವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರ ಅತ್ತಿಗುಪ್ಪೆ ಯಲ್ಲಿ ವಾಸವಿದ್ದರು.

Also Read  ಅನ್ಯಕೋಮಿನ ಜೋಡಿಗೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನ ➤ ದೂರು ದಾಖಲು

 

error: Content is protected !!
Scroll to Top