ತೊಕ್ಕೊಟ್ಟು :ಬೈಕ್ – ಆ್ಯಕ್ಟಿವಾ ನಡುವೆ ನಸುಕಿನ ಜಾವ ಭೀಕರ ಅಪಘಾತ ➤ಬೈಕ್ ಸವಾರ ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚೆಂಬುಗುಡ್ಡೆ ಬಳಿ ಇಂದು (ಶನಿವಾರ) ನಸುಕಿನ ಜಾವ ನಡೆದಿದೆ.

ಸಂತೋಷನಗರ ನಿವಾಸಿ ಸಂದೇಶ್ ಕೆರೆಬೈಲ್ (38) ಸಾವನ್ನಪ್ಪಿದವರು. ಸುಮಾರು 3 ಗಂಟೆಯ ವೇಳೆ ಈ ಅಪಘಾತ ನಡೆದಿದ್ದು, ಸಂದೇಶ್ ಅವರು ಕೊಲ್ಯ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮನೆಗೆ ವಾಪಸ್ಸಾಗುತ್ತಿದ್ದರು.ಅಪಘಾತದ ಪರಿಣಾಮ ಸಂದೇಶ್ ರಸ್ತೆಗುರುಳಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಮಂಗಳೂರಿನ ನಾಗುರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಆಗಸ್ಟ್ ನಲ್ಲಿ ಸಿಹಿನೀರು ಮುತ್ತು ಕೃಷಿ ತರಬೇತಿ

error: Content is protected !!
Scroll to Top