ಕುತ್ತಾರು :ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಅಪಘಾತ ನಡೆಸಿ, ಚೂರಿಯಿಂದ ಇರಿದ ದುಷ್ಕರ್ಮಿಗಳು.?!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕಿನಲ್ಲಿ ಬಂದ ತಂಡವೊಂದು ಅಪಘಾತ ನಡೆಸಿ, ಇಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ಕಳೆದ ದಿನ ತಡರಾತ್ರಿ ಸಂಭವಿಸಿದೆ.

 

ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಚೂರಿ ಇರಿತಕ್ಕೊಳಗಾದವರು .ಆದಿತ್ಯ ಮತ್ತು ಪವನ್ ಅವರು ಕ್ಯಾಟ್ರಿಂಗ್ ನಲ್ಲಿ ಕೆಲಸಕ್ಕಿದ್ದ ಸ್ನೇಹಿತನನ್ನು ಕರೆ ತರಲು ಕುತ್ತಾರ್ ನಿಂದ ಅಂಬ್ಲಮೊಗರು ಕಡೆ ಶುಕ್ರವಾರ ರಾತ್ರಿ ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣ ಕೋಡಿ ಬಳಿ ಹಿಂಬದಿಯಿಂದ ಬಂದ ಅಪರಿಚಿತ ಬೈಕ್, ಇವರಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಬಳಿಕ ಇಬ್ಬರಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಸಂಭಂದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಜ್ಯೋತಿಷ್ಯದ ಪ್ರಕಾರ ಈ ರಾಶಿಯವರು ಹೆಚ್ಚು ಪ್ರೀತಿಸುತ್ತಾರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

 

error: Content is protected !!
Scroll to Top