ಮಂಗಳೂರು :ಸಿಎಫ್ ಐ ನಿಂದ ಸಂಸದ ನಳಿನ್ ಕಚೇರಿಗೆ ಮುತ್ತಿಗೆ ಯತ್ನ.!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.26: ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿಎಫ್ಐ) ಸಂಘಟನೆಯ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

 

PFI ಮುಖಂಡರ ಮೇಲೆ ಇ.ಡಿ. ತನಿಖೆ ವಿರೋಧಿಸಿ ಸಿಎಫ್ ಐ ಕಾರ್ಯಕರ್ತರು ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ‌ ನಡೆಸಿದರು.ಈ ವೇಳೆ ಸಂಸದರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು, ಮಾತಿನ ಚಕಮಕಿ ನಡೆಯಿತು.ಪೊಲೀಸರ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿ ಗೇಟ್ ಮುರಿದು, ಒಳಗೆ ನುಗ್ಗಲು ಯತ್ನಿಸಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Also Read  ಕಟ್ಟಡಗಳ ಪರವಾನಿಗೆ ಮತ್ತು ಪ್ರವೇಶ ಪತ್ರಗಳ ಮಂಜೂರಾತಿಗೆ ಅಧಿಕಾರ ನೀಡಿ ಆದೇಶ

 

error: Content is protected !!
Scroll to Top