(ನ್ಯೂಸ್ ಕಡಬ) newskadaba.com ಉಳ್ಳಾಲ ,ಅ.12. ವೇಗವಾಗಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕಟಿನಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಮೃತ ಯುವಕನ್ನು ಬೆಳ್ತಂಗಡಿ ಮೂಲದ ಸಲೀಂ(30) ಕೇ.ಸಿ.ರೋಡ್ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಸ್ಟಾಂಡ್ ಹಾಕಿ ವಾಹನ ಚಲಿಸಿದ್ದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗ್ತಿದೆ.

ಮೃತನ ದ್ವಿಚಕ್ರ ವಾಹನದಲ್ಲಿ ಎರಡು ಪ್ಯಾಕೆಟ್ ಗಾಂಜ ಪತ್ತೆಯಾಗಿದ್ದು ಈತ ಗಾಂಜ ಸೇವಿಸಿ ವಾಹನ ಚಲಾಯಿಸಿದ್ದಾನೆಯೇ ಎಂಬುದು ಇನ್ನು ನಿಖರವಾಗಿ ತಿಳಿದು ಬಂದಿಲ್ಲ.

ಘಟನೆ ಕುರಿತು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.