ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26:  ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ನಡೆದಿದೆ. ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಬೆಳಿಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿಷ್ಣು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸಿರುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದುಕೊಂಡರು.ಈ ಹಿಂದೆ ಪ್ರತಿಮೆಯನ್ನು ಕಿಡಿಗೇಡಿಗಳು ಹೊತ್ತೊಯ್ದಿದ್ದ ಘಟನೆಯೂ ನಡೆದಿತ್ತು. ಆನಂತರ ಪ್ರತಿಮೆಯನ್ನು ವಾಪಸ್ ತಂದಿಡಲಾಗಿತ್ತು. ಈಗ ರಾತ್ರೋ ರಾತ್ರಿ ದುಷ್ಕರ್ಮಿಗಳು ಪ್ರತಿಮೆ ಧ್ವಂಸಗೊಳಿಸಿ ವಿಕೃತಿ ಮೆರೆದಿದ್ದಾರೆ. ಮುನ್ನೆಚ್ಚೆರಿಕೆ ಕ್ರಮವಾಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Also Read  ಜಿಲ್ಲಾ ಗೃಹರಕ್ಷಕದಳ ಕಚೇರಿ ➤ ಕಾರ್ಗಿಲ್ ದಿನಾಚರಣೆ

 

 

error: Content is protected !!
Scroll to Top