(ನ್ಯೂಸ್ ಕಡಬ) newskadaba.com ಸುಳ್ಯ, ಡಿ.27: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಸಂಸ್ಥಾಪಕ, ಶಿಕ್ಷಣ ಬ್ರಹ್ಮ ಡಾ. ಕುರುಂಜಿ ವೆಂಕಟ್ರಮಣ ಗೌಡರ 92 ನೇ ಜನ್ಮದಿನಾಚರಣೆಯನ್ನು ಸ್ಥಾಪಕರ ದಿನಾಚರಣೆ ಸಮಿತಿ ವತಿಯಿಂದ ಕೆ.ವಿ.ಜಿ. ಕ್ಯಾಂಪಸ್‌ನಲ್ಲಿರುವ ಡಾ. ಕುರುಂಜಿಯವರ ಪುತ್ಥಳಿಗೆ ಹಾರಾರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾರಾರ್ಪಣೆ ಮಾಡಿ ಮಾತನಾಡಿ, ಡಾ. ಕುರುಂಜಿಯವರ ಆದರ್ಶಗಳನ್ನು ನಾವು ಮೈಗೂಡಿಸಿಕೊಳ್ಳುವ ಮೂಲಕ ಅವರ ಸಂಸ್ಮರಣೆ ಮಾಡಿದರೆ ಹೆಚ್ಚು ಅರ್ಥಪೂರ್ಣವಾಗುತ್ತದೆ. ಪ್ರಪಂಚದಾದ್ಯಂತ ನಮ್ಮ ಸಂಸ್ಥೆಯಲ್ಲಿ ಕಲಿತ ವಿದ್ಯಾರ್ಥಿಗಳು ಬೇರೆ ಬೇರೆ ಉದ್ಯೋಗದಲ್ಲಿರುವುದು ನಮ್ಮ ಸಂಸ್ಥೆಗೆ ಹೆಮ್ಮೆ ಎಂದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ, ಕೋಶಾಧಿಕಾರಿ ಶೋಭಾ ಚಿದಾನಂದ, ನಿರ್ದೇಶಕ ಅಕ್ಷಯ್ ಕೆ.ಸಿ, ನಿರ್ದೇಶಕರಾದ ಕೆ.ವಿ. ಹೇಮನಾಥ್, ಅಕ್ಷಯ್ ಕೆ.ಸಿ, ಡಾ. ಐಶ್ವರ್ಯ, ಡಾ. ಗೌತಮ್ ಗೌಡ, ಸ್ಥಾಪಕರ ದಿನಾಚರಣೆ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ. ಲೀಲಾಧರ್ ಡಿ.ವಿ ಸೇರಿದಂತೆ ಎಲ್ಲಾ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿಗಳು, ಪ್ರಿನ್ಸಿಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕೆ.ವಿ.ಜಿ. ಸಮೂಹ ಸಂಸ್ಥೆಗಳ ನಿವೃತ್ತ ಪ್ರಿನ್ಸಿಪಾಲರು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೆ.ವಿ.ಜಿ. ಸ್ಥಾಪಕರ ದಿನಾಚರಣೆ ಸಮಿತಿಯ ಅಧ್ಯಕ್ಷ ಮತ್ತು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಿನ್ಸಿಪಾಲ್ ಡಾ.ಎನ್.ಎ.ಜ್ಞಾನೇಶ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ವಂದಿಸಿದರು. ಕೆ.ವಿ.ಜಿ. ಐಟಿಐ ಉಪನ್ಯಾಸಕರಾದ ಭವಾನಿಶಂಕರ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು.