(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಮಂಗಳೂರಿಗೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು 72 ಗಂಟೆಯ ಒಳಗೆ ಕೊರೋನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊರೋನಾ ವೈರಸ್‌ನ ಎರಡನೇ ಅಲೆಯು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮವನ್ನು ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರಯಾಣಿಕರು ತಮ್ಮ ಕೊರೊನಾ ಪರೀಕ್ಷೆಯನ್ನು ಮಾಡದಿದ್ದಲ್ಲಿ ಆರ್.ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಡಿಸೆಂಬರ್ 26 ರಿಂದ ಪರೀಕ್ಷೆಗೆ ಒಳಗಾಗುತ್ತಿದ್ದು, ಅವರ ಪರೀಕ್ಷಾ ವರದಿ ಬರುವವರೆಗೆ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ.