ಮುಲ್ಕಿ: ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ನೀರಿನಲ್ಲಿ ಮುಳುಗಿ ಕಡಬದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮುಲ್ಕಿಯಲ್ಲಿ ಗುರುವಾರದಂದು ನಡೆದಿದೆ.

ಮೃತ ವ್ಯಕ್ತಿಯನ್ನು ಕಡಬ ತಾಲೂಕಿನ ಆರ್ತಿಲ ನಿವಾಸಿ ಜಯರಾಮ ಗೌಡ(41) ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ಗುರುವಾರದಂದು ಮಂಗಳೂರಿಗೆ ತೆರಳಿದ್ದು, ಮುಲ್ಕಿ ಸಮೀಪದ ಸಸಿಹಿತ್ಲು ಬೀಚ್ ನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಸಾಮಾಜಿಕ, ಧಾರ್ಮಿಕ ರಂಗದಲ್ಲಿ ಗುರುತಿಸಿಕೊಂಡಿದ್ದು, ಜೇಸಿಐ ಕಡಬ ಕದಂಬ ಘಟಕದ ಪೂರ್ವಾಧ್ಯಕ್ಷರಾಗಿದ್ದರು‌.

Scroll to Top