ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ತಡೆ



(ನ್ಯೂಸ್ ಕಡಬ) newskadaba.com ಕುಂದಾಪುರ, ಜ.01. 17 ವರ್ಷದ ಬಾಲಕಿಯೋರ್ವಳ ವಿವಾಹ ನಡೆಸಲು ಮುಂದಾದ ಸಂದರ್ಭದಲ್ಲಿ  ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮದುವೆಯನ್ನು ತಡೆದ ಘಟನೆ ನಡೆದಿದೆ.





ಕುಂದಾಪುರ ತಾಲೂಕಿನ ತಲ್ಲೂರು ಗುಡ್ಡೆಯಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ಹುಡುಗನೊಂದಿಗೆ ವಿವಾಹ ಮಾಡಲು ಎರಡೂ ಕಡೆಯ ಸಂಬಂಧಿಕರೂ ಕೂಡಾ ಒಪ್ಪಿದ್ದು, ಸಮಾರಂಭಕ್ಕೆ 200ಕ್ಕೂ ಅಧಿಕ ಮಂದಿ ಸೇರಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಇತರ ಇಲಾಖಾ ಅಧಿಕಾರಿಗಳ ಜೊತೆ ಸ್ಥಳಕ್ಕೆ ತೆರಳಿ ಬಾಲ್ಯವಿವಾಹವನ್ನು ತಡೆದಿದ್ದಾರೆ.






error: Content is protected !!
Scroll to Top