ಹೋರಾಟ ಸಮಿತಿ ವತಿಯಿಂದ ಉ.ಕ ಧ್ವಜ ಹಾರಿಸುವ ಮೂಲಕ ಪ್ರತ್ಯೇಕ ರಾಜ್ಯ ಮಾಡುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ.01. ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ಧ್ವಜ ಹಾರಿಸುವ ಮೂಲಕ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವಂತೆ ಒತ್ತಾಯಿಸಲಾಗಿದೆ.

 

 

ಗಡಿನಾಡು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪಟ್ಟಣದಲ್ಲಿ ಪೊಲೀಸರ ಕಣ್ಣು ತಪ್ಪಿಸಿ, ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಅಡಿವೇಶ್ ಇಟಗಿಯವರ ನೇತೃತ್ವದಲ್ಲಿ ಪ್ರತ್ಯೇಕ ಧ್ವಜಾರೋಹಣ ಮಾಡಲಾಗಿದೆ.

Scroll to Top