ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ಗುಪ್ತಾಂಗದಲ್ಲಿ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು 1.26 ಕೆಜಿ ಚಿನ್ನ ಸಹಿತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಆರೋಪಿಗಳನ್ನು ಮಹಮ್ಮದ್ ಜಹೀರ್ ಹಾಗೂ ವಾಸಿಂ ಮರ್ಜನ್ ಎಂದು ಗುರುತಿಸಲಾಗಿದೆ. ಇವರು ಡಿ. 30ರಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ.

error: Content is protected !!
Scroll to Top