ಪೇಜಾವರ ಶ್ರೀಗಳಿಗೆ ‘ವೈ’ ಶ್ರೇಣಿಯ ಭದ್ರತೆ ಕಲ್ಪಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಉಡುಪಿ, ಜ.01. ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಾದ ಪೇಜಾವರ ಮಠಾಧೀಶರಿಗೆ ರಾಜ್ಯ ಸರ್ಕಾರವು ‘ವೈ’ ಭದ್ರತೆ ಒದಗಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮಮಂದಿರದ ಮೇಲ್ವಿಚಾರಣೆಯನ್ನು ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರಲ್ಲಿ ಒಬ್ಬರಾಗಿರುವ ಪೇಜಾವರ ಶ್ರೀಗಳಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಉಡುಪಿಯ ಶಾಸಕ ರಘುಪತಿ ಭಟ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿರುವ ರಾಜ್ಯ ಸರಕಾರವು ವೈ ಶ್ರೇಣಿಯ ಭದ್ರತೆ ನೀಡಿ ಆದೇಶಿಸಿದೆ.

Also Read  ಮರ್ಧಾಳ: ಪೇಟೆಯ ಸಮೀಪ ಮತ್ತೆ ಮತ್ತೆ ಪ್ರತ್ಯಕ್ಷವಾಗುತ್ತಿರುವ ಕಾಡಾನೆಗಳು ➤ ಇಬ್ಬರನ್ನು ಬಲಿ ಪಡೆದ ಘಟನೆ ಮಾಸುವ ಮುನ್ನವೇ ಮತ್ತೆ ಆತಂಕದಲ್ಲಿ ಸಾರ್ವಜನಿಕರು

error: Content is protected !!
Scroll to Top