ಈಜುಕೊಳಗಳನ್ನು ತೆರೆಯದಂತೆ ಹಾಗೂ ಗ್ರಾಹಕರು ಅಥವಾ ಸಾರ್ವಜನಿಕರು ಬಳಸದಂತೆ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲೆಯಲ್ಲಿ  ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿ 9 ರಂತೆ ಕಂಟೈನ್ ಮೆಂಟ್ ವಲಯದ ಹೊರಗೆ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶಕ್ಕಾಗಿ ಮಾತ್ರವೇ ಈಜುಕೊಳಗಳನ್ನು ತೆರೆಯಲು ಹಾಗೂ ಬಳಕೆ ಮಾಡಲು ಅವಕಾಶವಿರುತ್ತದೆ. ಇದನ್ನು  ಹೊರತುಪಡಿಸಿ ಯಾವುದೇ ಹೋಟೆಲ್/ ಲಾಡ್ಜ್/ ರೆಸಾರ್ಟ್ ಗಳಲ್ಲಿ ಈಜುಕೊಳಗಳನ್ನು ತೆರೆಯಲು ಹಾಗೂ ಗ್ರಾಹಕರಿಗೆ ಅಥವಾ ಸಾರ್ವಜನಿಕರಿಗೆ ಬಳಸಲು ಅವಕಾಶವಿರುವುದಿಲ್ಲ.


ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಯಾವುದೇ ಈಜುಕೊಳಗಳನ್ನು ಪ್ರಾರಂಭಿಸಲು ಜಿಲ್ಲಾಡಳಿತದ ಪೂರ್ವಾನುಮೋದನೆ ಪಡೆಯುವುದನ್ನು ಕಡ್ಡಾಯಗೊಳಿಸಿದ್ದಾರೆ. ಹಾಗೂ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ 2020 ರನ್ವಯ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ  ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ  ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

Also Read  ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವಲಯ ಸಮಿತಿ ವತಿಯಿಂದ ತರಕಾರಿ ಬೀಜ ವಿತರಣೆ

error: Content is protected !!
Scroll to Top