ಉಡುಪಿ: ಸ್ಕೂಟರ್- ಲಾರಿ ನಡುವೆ ಡಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಉಡುಪಿ, ಜ. 02. ಸ್ಕೂಟರ್‌‌ ಹಾಗೂ ಮೀನಿನ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ.

 

ಮೃತಪಟ್ಟವರನ್ನು ಹೂಡೆ ನಿವಾಸಿ ಐಸಾಕ್‌‌ ಎಂದು ಗುರುತಿಸಲಾಗಿದೆ. ಹೂಡೆ ಕಡೆಯಿಂದ ಮಲ್ಪೆ ಕಡೆಗೆ ಬರುತ್ತಿದ್ದ ಸ್ಕೂಟರಿಗೆ ಎದುರಿನಿಂದ ಬಂದ ಮೀನಿನ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಸ್ಕೂಟರ್‌ ಸವಾರ ಐಸಾಕ್‌ ಎಂಬವರನ್ನು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮಾರ್ಗದ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





error: Content is protected !!
Scroll to Top