ಎರ್ಮೆಟ್ಟಿ: ಬೆಂಕಿ ಬಿದ್ದು ಕೊಟ್ಟಿಗೆ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಜ. 02. ಕೆಮ್ರಾಜೆ ಗ್ರಾಮದ ಎರ್ಮೆಟ್ಟಿ ಎಂಬಲ್ಲಿ ಮನೆಯೊಂದರ ಸಮೀಪದ ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಕೊಟ್ಟಿಗೆಯು ಸಂಪೂರ್ಣ ಹೊತ್ತಿ ಉರಿದ ಘಟನೆ ಭಗೀರಥಿ ಎಂಬವರ ಮನೆಯಲ್ಲಿ ನಡೆದಿದೆ.


ನಿನ್ನೆ ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಬೆಂಕಿ‌ ಹೊತ್ತಿಕೊಂಡಿದ್ದು ಮನೆಯವರ ಬೆಳಕಿಗೆ ಬಂದಿದೆ. ವಿಷಯ ತಿಳಿದ ಸ್ಥಳೀಯರು ನೆರವಿಗೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

error: Content is protected !!
Scroll to Top