ಕಾಮಗಾರಿ ವೀಕ್ಷಿಸುತ್ತಿದ್ದ ಸಂದರ್ಭ ಆಕಸ್ಮಾತ್ ಗುಡ್ಡ ಕುಸಿತ ➤ ಕೂದಲೆಳೆಯ ಅಂತರದಿಂದ ಪಾರಾದ ಸಚಿವ ಜಗದೀಶ್ ಶೆಟ್ಟರ್…!

(ನ್ಯೂಸ್ ಕಡಬ) newskadaba.com ಜ. 02. ರೈಲ್ವೇ ಕಾಮಗಾರಿ ವೀಕ್ಷಣೆಯ ಸಂದರ್ಭ ದಿಢೀರ್ ಮಣ್ಣು ಕುಸಿದು ಸಚಿವ ಜಗದೀಶ್ ಶೆಟ್ಟರ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿಯ ಭವಾನಿನಗರ ಹಾಗೂ ದೇಶಪಾಂಡೆ ನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ ನಿರ್ಮಾಣದ ಕಾಮಗಾರಿಯು ಅಭಿವೃದ್ಧಿ ಪರಿಶೀಲನೆಗೆಂದು ಜಗದೀಶ್ ಶೆಟ್ಟರ್ ಮತ್ತು ಮತ್ತು ಅಧಿಕಾರಿಗಳು ಅಲ್ಲಿಗೆ ತೆರಳಿದ್ದ ಸಮಯದಲ್ಲಿ ಕೆಳಸೇತುವೆ ಪಕ್ಕದಲ್ಲಿ ಭಾರಿ ಪ್ರಮಾಣದ ಮಣ್ಣಿನ ದಿಬ್ಬ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಅಧಿಕಾರಿಗಳು ಅಪಾಯದಿಂದ ಪಾರಾಗಿದ್ದಾರೆ.

Also Read  ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ..!

error: Content is protected !!
Scroll to Top