ತರಕಾರಿ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ತರಕಾರಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ನಿರ್ವಾಹಕ ಗಾಯಗೊಂಡ ಘಟನೆ ಮಾಳ ಘಾಟಿಯಲ್ಲಿ ಇಂದು ನಡೆದಿದೆ.

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ನಿವಾಸಿ ಅಣ್ಣಪ್ಪ(57) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಬಜಗೋಳಿಗೆ ತರಕಾರಿ ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top