ಕನ್ನಡ ಪುಸ್ತಕ ಪ್ರಾಧಿಕಾರ – ಪುಸ್ತಕಗಳು ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ಗಣರಾಜ್ಯೋತ್ಸವದ ಅಂಗವಾಗಿ ಪ್ರಸ್ತುತ ಸಾಲಿನ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರ ಮಾಡಲಾಗುತ್ತಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಅಂತರ್ಜಾಲ ತಾಣ www.kannadapustakapradhikara.com ನಲ್ಲಿ ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯವಿದೆ. ಪುಸ್ತಕ ಲಭ್ಯವಿರುವ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪುಸ್ತಕ ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.  ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಸೂರದಾಸಜಯಂತಿ ಹಾಗೂ ದಿವ್ಯಾಂಗ ವಿದ್ಯಾರ್ಥಿಗಳಿಗೆ ಸ್ಕೂಲ್‍ಕಿಟ್ ವಿತರಣೆ.

error: Content is protected !!
Scroll to Top