ಸಿ.ಎಂ. ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ➤ ಬಿಜೆಪಿ ಶಾಸಕ ಯತ್ನಾಳ್ ಗೆ ಬಿಗ್ ಶಾಕ್

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.03. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇದೀಗ ಪಕ್ಷದಿಂದ ಬಿಗ್ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು,  ಶನಿವಾರದಂದು ನಡೆದ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ನೋಟಿಸ್ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

 

ಸಭೆಯಲ್ಲಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿಚಾರದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಸ್ತಾಪಿಸಿ, ಶಾಸಕ ಯತ್ನಾಳ್ ಅವರಿಗೆ ಹಲವು ಬಾರಿ ಸೂಚನೆ ನೀಡಲಾಗಿದ್ದರೂ ಕೂಡ ಅವರು ಮತ್ತೆ ಮತ್ತೆ ಮುಖ್ಯಮಂತ್ರಿಯ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ಯತ್ನಾಳ್ ಅವರಿಗೆ ನೋಟಿಸ್ ನೀಡುವಂತೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

Also Read  ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ; ಪ.ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

error: Content is protected !!
Scroll to Top