(ನ್ಯೂಸ್ ಕಡಬ) newskadaba.com ಮಂಗಳೂರು, ಜ.03. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿರುವ ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ವಿದ್ಯುತ್ cವನ್ನು ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವ ಸಲ್ಲಿಸಿದೆ.
ಪ್ರಸ್ತುತ ಇರುವ ದರಗಳಿಂದ ಮೆಸ್ಕಾಂನ ಅಗತ್ಯತೆಗಳನ್ನು ಪೂರೈಸಲು ಅಸಾಧ್ಯವಾಗುತ್ತಿರುವ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲ ವರ್ಗಗಳ ವಿದ್ಯುತ್ ಬಳಕೆದಾರರನ್ನು ಗಮನದಲ್ಲಿರಿಸಿಕೊಂಡು ಪ್ರತೀ ಯೂನಿಟ್‌ಗೆ ಸರಾಸರಿ 1.67 ರೂ. ವಿದ್ಯುತ್ ದರ ಏರಿಕೆ ಮಾಡುವಂತೆ ಮೆಸ್ಕಾಂ ಪ್ರಸ್ತಾವವನ್ನು ಸಲ್ಲಿಸಿದೆ. ಕಳೆದ ಸಾಲಿನಲ್ಲಿ ಸರಾಸರಿ 62 ಪೈಸೆ ವಿದ್ಯುತ್ ದರ ಏರಿಸುವಂತೆ ಮೆಸ್ಕಾಂ ಪ್ರಸ್ತಾವ ಸಲ್ಲಿಸಿತ್ತಾದರೂ ಆಯೋಗವು ಸರಾಸರಿ 40 ಪೈಸೆ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು.