ಹಿಂದೂ ದೇವತೆಗಳ ಅವಮಾನದ ಆರೋಪ ➤ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03. ಹಿಂದೂ ದೇವತೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ, ಮಾಜಿ ಸಚಿವ ಮುರಗೇಶ್ ನಿರಾಣಿ ವಿರುದ್ಧ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮಾರಂಭವೊಂದರಲ್ಲಿ ಶಾಸಕ ಮುರುಗೇಶ್ ನಿರಾಣಿ ಅವರು ಹಿಂದೂ ದೇವತೆಗಳನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದರು ಎಂದು ಆರೋಪಿಸಲಾಗಿದೆ. ರಾಮಾಯಣದ ಕಥೆಗಳನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎನ್ನಲಾಗಿದ್ದು, ಈ ಬಗ್ಗೆ ಹಿಂದ ಸಂಘಟನೆಯ ಮುಖಂಡರು ನೀಡಿದ ದೂರಿನಂತೆ ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top