ಅಸ್ವಸ್ಥರಾಗಿದ್ದ ಡಿ.ವಿ ಸದಾನಂದ ಗೌಡರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಶಿಫ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 03. ಸಕ್ಕರೆ ಪ್ರಮಾಣ ಕಡಿಮೆಯಾದ ಪರಿಣಾಮ ಅಸ್ವಸ್ಥರಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ ರವಾನಿಸಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಇವರು ಬೆಂಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗ ಮೂಲಕ ಬೆಂಗಳೂರಿಗೆ ಹೊರಟಿದ್ದು, ಈ ವೇಳೆ ಊಟ ಮಾಡಲೆಂದು ಹೊಟೇಲೊಂದರ ಬಳಿ ಕಾರಿನಿಂದ ಇಳಿದಿದ್ದು, ಕೆಲವೇ ನಿಮಿಷಗಳಲ್ಲಿ ಅವರು ಕುಸಿದು ಬಿದ್ದಿದ್ದರು. ಇದರಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಇದೀಗ ಹೆಚ್ಚಿನ ತಪಾಸಣೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Also Read  ಕಡಬ: ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗಗ್ರಹಣ ಸಮಾರಂಭ

error: Content is protected !!
Scroll to Top