ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ದೇಶಾದ್ಯಂತ ಇಂದಿನಿಂದ 80 ಹೊಸ ವಿಶೇಷ ರೈಲುಗಳ ಸಂಚಾರ ಆರಂಭ

error: Content is protected !!
Scroll to Top