ನೆಲ್ಯಾಡಿ: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ➤ ಸುಟ್ಟು ಕರಕಲಾದ ಮೃತದೇಹ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಯುವತಿಯೋರ್ವಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನೆಲ್ಯಾಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನೆಲ್ಯಾಡಿಯ ಉದ್ಯಮಿ ಬೇಬಿ ಎಂಬವರ ಪುತ್ರಿ ನವ್ಯಾ ನಯನ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಯುವತಿ ಡೆತ್ ನೋಟ್ ಬರೆದಿಟ್ಟು ತನ್ನ ಬೆಡ್ ರೂಂನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತದೇಹವು ಸುಟ್ಟು ಕರಕಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top